ಬದಿಯಡ್ಕ: ಪೆರಡಾಲ ನವಜೀವನ ಹಿರಿಯ ಪ್ರಾಥಮಿಕ ಶಾಲೆಯ ಸಮಾಜ ವಿಜ್ಞಾನ ಕ್ಲಬ್ಬಿನ ಆಶ್ರಯದಲ್ಲಿ ವಿವೇಕಾನಂದ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿವೇಕಾನಂದರ ಭಾವಚಿತ್ರಕ್ಕೆ ಪುμÁ್ಪರ್ಚನೆ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯನಿ ಮಿನಿ ಟೀಚರ್ ವಹಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಾಫಿ ಚೂರಿಪಳ್ಳ ಬಹುಮಾನ ವಿತರಿಸಿದರು. ಹಿರಿಯ ಅಧ್ಯಾಪಕಿ ಪ್ರಭಾವತಿ ಕೆದಿಲಾಯ, ಜ್ಯೋತ್ಸ್ನಾ ಟೀಚರ್ ಶುಭಹಾರೈಸಿದರು. ಸಮಾಜ ವಿಜ್ಞಾನ ಕ್ಲಬ್ಬಿನ ಸಂಚಾಲಕ ನಿರಂಜನ್ ರೈ ಪೆರಡಾಲ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ರಾಜೇಶ್ ಮಾಸ್ತರ್ ಅಗಲ್ಪಾಡಿ ವಂದಿಸಿದರು.