HEALTH TIPS

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ: ಪೊಲೀಸರಿಂದ ತನಿಖೆ

 

              ಮುಂಬೈ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಎರಡು ಸಲ ಜೀವ ಬೆದರಿಕೆ ಕರೆಗಳು ಬಂದಿವೆ.

              ಮಹಾರಾಷ್ಟ್ರದ ನಾಗಪುರದಲ್ಲಿರುವ ಅವರ ಕಚೇರಿಗೆ ಬೆದರಿಕೆ ಕರೆಗಳು ಬಂದಿರುವುದಾಗಿ ಅವರ ಕಚೇರಿ ಸಿಬ್ಬಂದಿ ಹೇಳಿದ್ದಾರೆ.

              ಶನಿವಾರ ಬೆಳಗ್ಗೆ 11.30ಕ್ಕೆ ಹಾಗೂ 11.40ಕ್ಕೆ ಎರಡು ಬಾರಿ ಕರೆ ಮಾಡಲಾಗಿದೆ. ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 


                 ಸಚಿವರ ಕಚೇರಿಗೂ ಮತ್ತು ನಿವಾಸಕ್ಕೂ ಒಂದು ಕಿ.ಮೀಟರ್‌ ದೂರ ಇದೆ. ಕಚೇರಿಯ ಲ್ಯಾಂಡ್‌ಲೈನ್‌ ಸಂಖ್ಯೆಗೆ ಕರೆ ಮಾಡಲಾಗಿದೆ. ಕರೆ ಮಾಡಿದ ವ್ಯಕ್ತಿ ಹಲವು ಬೇಡಿಕೆಗಳನ್ನು ಇಟ್ಟಿದ್ದು ಈಡೇರಿಸದಿದ್ದರೆ ಹತ್ಯೆ ಮಾಡುವುದಾಗಿ ಹೇಳಿದ್ದಾರೆ ಎಂದು ಗಡ್ಕರಿ ಕಚೇರಿ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

              

Maharashtra | Union Minister Nitin Gadkari's office in Nagpur received two threatening calls at 11.30 am and 11.40 am. Further investigation is going on: Nagpur Police
280
Reply
Copy link

ಮಾಹಿತಿ ಪಡೆದ ಪೊಲೀಸರು ಕಚೇರಿಗೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ನಾಗಪುರದಿಂದಲೇ ಕರೆ ಮಾಡಲಾಗಿದ್ದು ಆ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries