ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದೇರ್ಬಲ್ ಜಿಲ್ಲೆಯ ಸೋನಾಮಾರ್ಗ್‌ನಲ್ಲಿ ಗುರುವಾರ ಸಂಭವಿಸಿದ ಹಿಮಕುಸಿತದಿಂದಾಗಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಎಂಇಐಎಲ್) ಜೋಜಿಲ್ಲಾ ಸುರಂಗ ಕಾಮಗಾರಿ ನಿರ್ವಹಿಸುತ್ತಿರುವ ಸರ್ಬಲ್ ಪ್ರದೇಶದಲ್ಲಿ ಹಿಮಕುಸಿತ ಸಂಭವಿಸಿದೆ.
ಹಿಮಕುಸಿತವಾದ ಸ್ಥಳದಿಂದ ಕಾರ್ಮಿಕನ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶೋಧ ಕಾರ್ಯವು ಆರಂಭವಾಗಿದ್ದು, ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಸೇನೆ, ಬೀಕನ್ ಮತ್ತು ಎಂಇಐಎಲ್ ತಂಡಗಳು ಹಿಮಕುಸಿತದ ಪ್ರದೇಶವನ್ನು ತೆರವುಗೊಳಿಸುತ್ತಿದ್ದಾರೆ. ಜೊತೆಗೆ ಆಂಬ್ಯುಲೆನ್ಸ್ ಮತ್ತು ಪ್ರಥಮ ಶಸ್ತ್ರಚಿಕಿತ್ಸಾ ಕಿಟ್‌ಗಳೊಂದಿಗೆ ವೈದ್ಯಕೀಯ ತಂಡಗಳು ಸ್ಥಳದಲ್ಲಿವೆ.