HEALTH TIPS

ಕಾರಿನ ಸೀಟ್‌ಬೆಲ್ಟ್ ತೆಗೆದ ಬ್ರಿಟನ್ ಪ್ರಧಾನಿ ಸುನಕ್‌ಗೆ ದಂಡ ವಿಧಿಸಿದ ಪೊಲೀಸರು

 

               ಲಂಡನ್‌: ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ತೆಗೆದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಅವರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

                ಆರ್ಥಿಕ ಸಂಕಷ್ಟ, ನಾಯಕತ್ವ ಬದಲಾವಣೆ ಮತ್ತು ಇತರ ಕಾರಣಗಳಿಂದ ಸದ್ಯ ಸಂಕಷ್ಟದ ಪರಿಸ್ಥಿತಿಯಲ್ಲಿರುವ ಕನ್ಸರ್ವೇಟಿವ್‌ ಪಕ್ಷಕ್ಕೆ ಜನಪ್ರಿಯತೆ ತಂದುಕೊಡುವ ಪ್ರಯತ್ನದಲ್ಲಿರುವ ರಿಷಿ ಅವರಿಗೆ ಈ ಬೆಳವಣಿಗೆ ಹಿನ್ನಡೆ ಉಂಟು ಮಾಡಿದೆ.

                  ಉತ್ತರ ಇಂಗ್ಲೆಂಡ್‌ಗೆ ಕಾರಿನಲ್ಲಿ ಪ್ರಯಾಣಿಸುವಾಗ ಸಾಮಾಜಿಕ ಮಾಧ್ಯಮಕ್ಕಾಗಿ ವಿಡಿಯೊ ಚಿತ್ರೀಕರಣ ಮಾಡಲು ತಾತ್ಕಾಲಿಕವಾಗಿ ಸೀಟ್‌ ಬೆಲ್ಟ್‌ ತೆಗೆದಿದ್ದ ರಿಷಿ ಸುನಕ್‌ ಅವರು ವಿವಾದಕ್ಕೆ ಕಾರಣವಾಗಿದ್ದರು. ಈ ಪ್ರಮಾದಕ್ಕಾಗಿ ಅವರು ಕ್ಷಮೆಯನ್ನೂ ಕೇಳಿದ್ದಾರೆ.

                  ದೇಶದಾದ್ಯಂತ ಜಾರಿಗೊಳಿಸಲು ಉದ್ದೇಶಿಸಿರುವ 100ಕ್ಕೂ ಅಧಿಕ ಕಾರ್ಯಕ್ರಮಗಳ ಕುರಿತ ಪ್ರಚಾರಕ್ಕಾಗಿ ಮಾಡಿದ್ದ ವಿಡಿಯೊವನ್ನು ಸುನಕ್‌ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದರಲ್ಲಿ ಅವರು ಸೀಟ್‌ ಬೆಲ್ಟ್‌ ಧರಿಸದಿರುವುದನ್ನು ಸಾರ್ವಜನಿಕರು ಗಮನಿಸಿದ್ದರು. ಈ ವಿಷಯದ ಬಗ್ಗೆ ತನಿಖೆ ಮಾಡುವುದಾಗಿ ಪೊಲೀಸರು ತಿಳಿಸಿದ್ದರು.

                'ಅದು ತಪ್ಪು. ಸಣ್ಣ ಕ್ಲಿಪ್ ಅನ್ನು ಚಿತ್ರೀಕರಿಸಲು ಪ್ರಧಾನಿ ತಮ್ಮ ಸೀಟ್ ಬೆಲ್ಟ್ ಅನ್ನು ತೆಗೆದಿದ್ದಾರೆ. ತಮ್ಮಿಂದ ತಪ್ಪಾಗಿದೆ ಎಂದು ಸಂಪೂರ್ಣವಾಗಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ಕ್ಷಮೆಯಾಚಿಸಿದ್ದಾರೆ' ಎಂದು ಸುನಕ್ ಅವರ ವಕ್ತಾರರು ತಿಳಿಸಿದ್ದಾರೆ.

             ಬ್ರಿಟನ್‌ನಲ್ಲಿ ವೈದ್ಯಕೀಯ ಕಾರಣಗಳನ್ನು ಹೊರತುಪಡಿಸಿ, ಕಾರಿನ ಸೀಟ್‌ಬೆಲ್ಟ್ ಧರಿಸದವರಿಗೆ ಸ್ಥಳದಲ್ಲೇ 100 ಪೌಂಡ್‌ಗಳ (₹10 ಸಾವಿರಕ್ಕೂ ಹೆಚ್ಚು) ದಂಡ ವಿಧಿಸಲಾಗುತ್ತದೆ. ಪ್ರಕರಣ ನ್ಯಾಯಾಲಯಕ್ಕೆ ಹೋದರೆ ದಂಡ 500 ಪೌಂಡ್‌ಗಳಿಗೆ ಹೆಚ್ಚಲಿದೆ.

                ಕಳೆದ ವರ್ಷ, ಅಂದಿನ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಕೋವಿಡ್‌ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಸುನಕ್‌ ಅವರಿಗೆ ದಂಡ ವಿಧಿಸಿದರು. ಅದಾದ ನಂತರ ಎರಡನೇ ಬಾರಿಗೆ ಸುನಕ್‌ ಅವರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

          ಅಂದಹಾಗೆ ಪೊಲೀಸರಿಂದ ದಂಡ ಹಾಕಿಸಿಕೊಂಡ ಬ್ರಿಟನ್‌ನ ಎರಡನೇ ಪ್ರಧಾನಿ ಎಂಬ ಅಪಖ್ಯಾತಿಗೆ ಸುನಕ್‌ ಪಾತ್ರರಾಗಿದ್ದಾರೆ! ಈ ಹಿಂದೆ ಬೋರಿಸ್‌ ಜಾನ್ಸನ್‌ ಅವರಿಗೆ ಪೊಲೀಸರು ದಂಡ ವಿಧಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries