ಮಹಾಲ್: ಗಣರಾಜ್ಯೋತ್ಸವದ ಅಂಗವಾಗಿ ನಾಗಪುರದ ಆರೆಸ್ಸೆಸ್ (RSS) ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನಡೆಸಲಾಯಿತು.
ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜಸ್ಥಾನದ ರಾಜಧಾನಿ ಜೈಪುರಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ತೆರಳಿರುವುದರಿಂದ ನಾಗಪುರ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಉಪಸ್ಥಿತರಿರಲಿಲ್ಲ.