HEALTH TIPS

ಕೇಂದ್ರ ಸಚಿವ ಸಂಪುಟ ವಿಸ್ತರಣೆ, ಬಿಜೆಪಿ ಉಸ್ತುವಾರಿಗಳ ಬದಲಾವಣೆ?

 

                 ನವದೆಹಲಿ: ಮುಂಬರುವ 2024ರ ಲೋಕಸಭೆ ಚುನಾವಣೆ ಹಾಗೂ ಈ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಿದ್ಧಗೊಳ್ಳುತ್ತಿರುವ ಬಿಜೆಪಿ, ಪಕ್ಷ ಮರು ಸಂಘಟನೆಗೆ ಮುಂದಾಗಿದೆ. ಪ್ರಮುಖ ಉಸ್ತುವಾರಿಗಳ ಬದಲಾವಣೆ, ಕೇಂದ್ರ ಸಚಿವ ಸಂಪುಟ ವಿಸ್ತರಣೆಗೂ ಆಲೋಚಿಸುತ್ತಿದೆ.

                 ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ಕರ್ನಾಟಕ, ತೆಲಂಗಾಣ, ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ 10 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರೂಪುರೇಷೆ ಸಿದ್ಧಪಡಿಸುತ್ತಿದೆ ಎಂದು ಮೂಲಗಳು ಹೇಳಿವೆ.

                 ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹೈಕಮಾಂಡ್ ಯುವಕರತ್ತ ಹೆಚ್ಚು ಗಮನ ಹರಿಸುತ್ತಿದೆ. ಕೇಂದ್ರ ಸಚಿವ ಸಂಪುಟ ಮತ್ತು ಸಂಘಟನೆಯಲ್ಲಿ ಎರಡರಲ್ಲೂ ‌ಯುವಕರಿಗೆ ಹೆಚ್ಚು ಆದ್ಯತೆ ನೀಡುತ್ತಿದೆ. ಪ್ರಮುಖ ರಾಜ್ಯಗಳು ಮತ್ತು ಚುನಾವಣೆ ನಡೆಯಲಿರುವ ರಾಜ್ಯಗಳ ನಾಯಕರ ಮೇಲೆ ಹೆಚ್ಚು ಗಮನಹರಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

                 ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧ್ಯಕ್ಷ ಅವಧಿ ಜನವರಿಯಲ್ಲಿ ಅಂತ್ಯಗೊಳ್ಳಲಿದೆ. ಹೀಗಾಗಿ ಈ ತಿಂಗಳು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ನಡ್ಡಾ ಅವರ ಅವಧಿಯನ್ನು ವಿಸ್ತರಿಸುವ ಅಧಿಕೃತ ಘೋಷಣೆಯೂ ಇದೇ ತಿಂಗಳು ಹೊರಬೀಳುವ ನಿರೀಕ್ಷೆಯಿದೆ.

                  ಬಿಜೆಪಿಯ ಮೂಲಗಳ ಪ್ರಕಾರ, ನಡ್ಡಾ ಅವರ ಅವಧಿಯನ್ನು ವಿಸ್ತರಿಸಿದರೂ ಕೂಡ ಪದಾಧಿಕಾರಿಗಳು ಮತ್ತು ರಾಜ್ಯ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳಲ್ಲಿ ಪ್ರಮುಖ ಬದಲಾವಣೆಯಾಗುವ ಸಾಧ್ಯತೆಯಿದೆ.

                    ಮಕರ ಸಂಕ್ರಾಂತಿ ನಂತರ ಮೋದಿ ಅವರು ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡುವ ಸಾಧ್ಯತೆ ಇದೆ. ಈ ಹಿಂದಿನಂತೆ ಹೊಸ ಮತ್ತು ಯುವ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

               ಸಂಸತ್ತಿನ ಬಜೆಟ್ ಅಧಿವೇಶನ ಇನ್ನೂ ನಿರ್ಧಾರವಾಗಿಲ್ಲ. ಜನವರಿ 30ರ ವೇಳೆಗೆ ಅಧಿವೇಶನ ಪ್ರಾರಂಭವಾಗುವ ನಿರೀಕ್ಷೆಯಿದ್ದು, ಅದಕ್ಕೂ ಮೊದಲೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries