ಚಂಡೀಗಢ: ಪಂಜಾಬ್‌ನ ಜಲಂಧರ್ ಕ್ಷೇತ್ರದ ಕಾಂಗ್ರೆಸ್ ಸಂಸದ ಸಂತೋಖ್ ಚೌಧರಿ ಅವರು ಭಾರತ್ ಜೋಡೋ ಯಾತ್ರೆಯ ವೇಳೆ ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೊ ಯಾತ್ರೆಯು ಪಂಜಾಬ್‌ನ ಫಿಲ್ಲೌರ್‌ನಲ್ಲಿ ಸಾಗುತ್ತಿತ್ತು. ಇದರಲ್ಲಿ ಚೌಧರಿ ಅವರೂ ಭಾಗವಹಿಸಿದ್ದರು. ಈ ವೇಳೆ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಚೌಧರಿ ಅವರನ್ನು ಫಗ್ವಾರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದರು ಎಂದು ಬಾಜ್ವಾ ತಿಳಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ಶನಿವಾರ ಬೆಳಗ್ಗೆ ಪಂಜಾಬ್‌ನ ಲಾಧೋವಲ್‌ನಿಂದ ಆರಂಭಗೊಂಡಿತ್ತು.