HEALTH TIPS

'ನಾಳೆ ಐದು ಗಂಟೆಯೊಳಗೆ'; ಉಚ್ಚ ನ್ಯಾಯಾಲಯದ ಟೀಕೆ ಬಳಿಕ ಪಾಪ್ಯುಲರ್ ಫ್ರಂಟ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸರ್ಕಾರದಿಂದ ಕೊನೆಗೂ ಆದೇಶ


                ತಿರುವನಂತಪುರಂ: ಹರತಾಳ ಹಿಂಸಾಚಾರದ ವೇಳೆ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೊನೆಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
             ನ್ಯಾಯಾಲಯದ ಆದೇಶವಿದ್ದರೂ ಜಪ್ತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಹೈಕೋರ್ಟ್ ಟೀಕಿಸಿತ್ತು. ಇದರ ಬೆನ್ನಲ್ಲೇ ಸರ್ಕಾರ ಈ ಪ್ರಕ್ರಿಯೆ ಚುರುಕುಗೊಳಿಸಿ ಆದೇಶ ಹೊರಡಿಸಿದೆ.
           ಶನಿವಾರ ಸಂಜೆ 5 ಗಂಟೆಯೊಳಗೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಭೂಕಂದಾಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಪ್ರಕ್ರಿಯೆಯ ಭಾಗವಾಗಿ ಯಾವುದೇ ನೋಟಿಸ್ ನೀಡಬಾರದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
           ಈ ತಿಂಗಳೊಳಗೆ ಜಪ್ತಿ ಪ್ರಕ್ರಿಯೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಪಾಪ್ಯುಲರ್ ಫ್ರಂಟ್ ಭಯೋತ್ಪಾದಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಹೈಕೋರ್ಟ್ ಆದೇಶವನ್ನು ಜಾರಿಗೊಳಿಸಲು ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೇಳಿದ್ದು, ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿತ್ತು. ಈ ತಿಂಗಳ 15ರೊಳಗೆ ಜಪ್ತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಗೃಹ ಇಲಾಖೆ ನ್ಯಾಯಾಲಯಕ್ಕೆ ಈ ಹಿಂದೆ ತಿಳಿಸಿತ್ತು. ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ವಿ. ವೇಣು ಅವರು ಹೈಕೋರ್ಟ್‍ಗೆ ಬೇಷರತ್ ಕ್ಷಮೆ ಯಾಚಿಸಿದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries