ಕಾಸರಗೋಡು: ದೇಶದ ಸಾರ್ವಭೌಮತ್ವ, ನಾಗರಿಕರ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು ಸಂವಿಧಾನಕ್ಕೆ ಉಂಟಾಗುವ ಸಣ್ಣ ಹಾನಿಯೂ ದೇಶದ ಏಕತೆಗೆ ಅಪಾಯ ತಂದೊಡ್ಡಲು ಸಾಧ್ಯ ಎಂದು ಬಂದರು, ಪ್ರಚ್ಯವಸ್ತು ಮತ್ತು ವಸ್ತು ಸಂಗ್ರಹಾಲಯ ಖಾತೆ ಸಚಿವ ಅಹ್ಮದ್ ದೇವರ್ ಕೋವಿಲ್ ತಿಳಿಸಿದ್ದಾರೆ.
ಅವರು ಕಾಸರಗೋಡು ವಿದ್ಯಾನಗರದ ನಗರಸಭಾ ಸ್ಟೇಡಿಯಂನಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನಡೆಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ಸಂಸದ ರಾಜಮೋಹನ್ ಉಣ್ಣಿತ್ತಾನ್, ಶಾಸಕರಾದ ಎ.ಕೆ.ಎಂ.ಅಶ್ರಫ್, ಎನ್.ಎ.ನೆಲ್ಲಿಕುನ್ನು, ಸಿ.ಎಚ್.ಕುಂಜಂಬು, ಇ.ಚಂದ್ರಶೇಖರನ್, ಎಂ.ರಾಜಗೋಪಾಲನ್ ಹಾಗೂ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಸ್ ಪಾದೂರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್‍ಚಂದ್ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ವೈಭವ್ ಸಕ್ಸೇನಾ ಗೌರವ ವಂದನೆ ಸ್ವೀಕರಿಸಿದರು. ಸ್ವಾತಂತ್ರ್ಯ ಹೋರಾಟಗಾರರಾದ ಕೆ.ಕುಞÂರಾಮನ್ ನಂಬ್ಯಾರ್, ಗೋಪಾಲನ್ ನಾಯರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ಖಾದರ್ ಬದರಿಯಾ, ಕಾಸರಗೋಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಸಿ.ಎ.ಸೈಮಾ, ಹೆಚ್ಚುರಿ ಎಸ್.ಪಿ ಮುಹಮ್ಮದ್ ನದಿಮುದ್ದೀನ್, ಎಎಸ್‍ಪಿ ಪಿ.ಕೆ ರಾಜು, ಆರ್‍ಡಿಓ ಅತುಲ್ ಸ್ವಾಮಿನಾಥ್, ಸಹಾಯಕ ಜಿಲ್ಲಾಧಿಕಾರಿ ಎಸ್.ಶಶಿಧರನ್ ಪಿಳ್ಳೈ, ಕೆ.ಅಜೇಶ್ ತಹಸೀಲ್ದಾರರು, ಡಿವೈಎಸ್ಪಿಗಳು, ಜಿಲ್ಲೆಯ ಬ್ಲಾಕ್ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ಕಂದಾಯ, ಪೆÇಲೀಸ್ ಅಧಿಕಾರಿಗಳು, ರಾಜ್ಯ ಸಾರ್ವಜನಿಕ ವಲಯದ ನೌಕರರು ಹಾಗೂ ಸಾರ್ವಜನಿಕರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು. ಸಶಸ್ತ್ರ ಪಡೆ, ಪೆÇಲೀಸ್, ಮಹಿಳಾ ಪೆÇಲೀಸ್, ಅಬಕಾರಿ, ಸ್ಟೂಡೆಂಟ್ ಪೆÇಲೀಸ್ ಕೆಡೆಟ್‍ಗಳು, ರೆಡ್‍ಕ್ರಾಸ್, ಎನ್‍ಎಸ್‍ಎಸ್, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ನೇತೃತ್ವದಲ್ಲಿ ಪರೇಡ್ ನಡೆಯಿತು.
ಗಣರಾಜ್ಯೋತ್ಸವದ ಅಂಗವಾಗಿ ನಡೆದ ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ವಿವಿಧ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲೆಯ ವಿವಿಧ ಶಾಲೆ, ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ದೇಶದ ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ-ಸಚಿವ ಅಹಮ್ಮದ್ ದೇವರ್‍ಕೋವಿಲ್
0
ಜನವರಿ 26, 2023
Tags