ನವದೆಹಲಿ: ಭಾರತೀಯ ಜನತಾ ಪಕ್ಷವು ಸೋಮವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋ ಆಯೋಜಿಸಿದೆ.
ಜನವರಿ 16 ರಿಂದ 17 ರವರೆಗೆ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ರಾಷ್ಟ್ರ ರಾಜಧಾನಿಯ ಎನ್‌ಡಿಎಂಸಿ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ. ಈ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಮೊದಲ ದಿನ ಪ್ರಧಾನಿ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಇದಕ್ಕೂ ಮುನ್ನ ಪ್ರಮುಖ ಸಭೆಯ ಎರಡನೇ ದಿನವಾದ ಮಂಗಳವಾರ ರೋಡ್‌ಶೋ ನಡೆಸಲು ಯೋಜಿಸಲಾಗಿತ್ತು. ಆದರೆ ಪಕ್ಷವು ವೇಳಾಪಟ್ಟಿಯನ್ನು ಬದಲಾಯಿಸಿದ್ದು, ಇದೀಗ ಜನವರಿ 16 ರಂದು ಮೋದಿ ರೋಡ್ ಶೋ ನಡೆಯಲಿದೆ.
ಮೂಲಗಳ ಪ್ರಕಾರ, ಪ್ರಧಾನಿ ಮೋದಿಯವರು ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯು ಸ್ಥಳದವರೆಗೆ ಸುಮಾರು ಒಂದು ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ.
ಈ ರೋಡ್ ಶೋ ವೇಳೆ ವಿವಿಧ ರಾಜ್ಯಗಳ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಿದ್ದಾರೆ.
ಪಕ್ಷದ ಕಾರ್ಯಕರ್ತರು ರಸ್ತೆಯುದ್ದಕ್ಕೂ ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ.