ಮುಂಬೈ: ಬಹಿರ್ದೆಸೆಗೆ ತೆರಳಿದ್ದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಮೂವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ನಡೆಸಿ, ವಿಡಿಯೊ ಚಿತ್ರೀಕರಿಸಿರುವ ಘಟನೆ ಮುಂಬೈನ ಘಾಟ್ಕೊಪರ್‌ನಲ್ಲಿ ನಡೆದಿದೆ.
ಆರೋಪಿಗಳು ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಶೌಚಾಲಯದ ಒಳಗೆ ಕರೆದೊಯ್ದು ಅತ್ಯಾಚಾರ ನಡೆಸಿ, ವಿಡಿಯೊ ಚಿತ್ರೀಕರಿಸಿದ್ದಾರೆ.
ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಿಗೂ ಅಪ್‌ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.