ನವದೆಹಲಿ: ಸಂಸತ್ ಭವನದ ಹೊಸ ಕಟ್ಟಡವು ಜನವರಿ ಅಂತ್ಯದ ವೇಳೆಗೆ ಸಿದ್ಧವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಕಟ್ಟಡ ಕಾಮಗಾರಿ ಪೂರ್ಣವಾಗಿ ಮುಗಿದಿದ್ದು ಕಟ್ಟಡದ ಒಳಾಂಗಣ ವಿನ್ಯಾಸದ ಕೆಲಸಗಳು ಭರದಿಂದ ಸಾಗುತ್ತಿವೆ ಎಂದು ವರದಿಯಾಗಿದೆ.
ಮುಂಬರಲಿರುವ ಬಜೆಟ್ ಅಧಿವೇಶನದ ವೇಳೆಗೆ ಸಂಸತ್ ಭವನ ಸಿದ್ಧವಾಗಲಿದೆ. ಅಲ್ಲಿಯೇ ಬಜೆಟ್ ಅಧಿವೇಶನ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಬಜೆಟ್ ಅಧಿವೇಶನವನ್ನು ಹೊಸ ಕಟ್ಟಡದಲ್ಲಿ ಅಥವಾ ಈಗಿರುವ ಕಟ್ಟಡದಲ್ಲೇ ನಡೆಸಲಾಗುವುದೊ ಎಂಬ ಕುರಿತು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸೆಂಟ್ರಲ್ ವಿಸ್ಟಾ ಯೋಜನೆಯ ಭಾಗವಾಗಿ ಹೊಸ ಸಂಸತ್ ಭವನವನ್ನು ನಿರ್ಮಿಸಲಾಗುತ್ತಿದೆ.