ನವದೆಹಲಿ: ದ್ವೇಷ ಭಾಷಣ ಅಪಾಯಕಾರಿ. ಮುಕ್ತ ಮತ್ತು ಸಮತೋಲಿತ ವರದಿ ಬಿತ್ತರಿಸುವ ಮಾಧ್ಯಮಗಳು ದೇಶಕ್ಕೆ ಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.
ದೇಶದಾದ್ಯಂತ ದ್ವೇಷ ಭಾಷಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ, 'ದ್ವೇಷ ಭಾಷಣ ಅಪಾಯಕಾರಿ, ಅದು ನಿಲ್ಲಲೇಬೇಕು' ಎಂದು ಹೇಳಿತು.