ಕಾಸರಗೋಡು: ಗಡಿನಾಡ ಸಾಂಸ್ಕøತಿಕ ಅಕಾಡಮಿ ಕಾಸರಗೋಡು, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಭಾರತ್ ಭವನ ತಿರುವನಂತಪುರ-ಕೇರಳ ಸರ್ಕಾರ ಸಹಯೋಗದೊಂದಿಗೆ'ಅನಂತಪುರಿ ಗಡಿನಾಡ ಸಾಂಸ್ಕøತಿಕ ಉತ್ಸವ-2023' ಫೆ. 7ರಂದು ತಿರುವನಂತಪುರ ತೈಕಾಡ್ ಪೌಂಡ್ ಕಾಲನಿಯ ಭಾರತ್ ಭವನ ಸಭಾಂಗಣದಲ್ಲಿ ಜರುಗಲಿದೆ.
ಬೆಳಗ್ಗೆ 9.30ಕ್ಕೆ ನಡೆಯುವ ಸಮಾರಂಭದಲ್ಲಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಉದ್ಘಾಟಿಸುವರು. ಕಾಸರಗೋಡು ಗಡಿನಾಡ ಸಾಂಸ್ಕøತಿಕ ಅಕಾಡಮಿ ಸಂಸ್ಥಾಪಕ ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸುವರು. ಈ ಸಂದರ್ಭ ನಡೆಯುವ ಸಾಧಕರಿಗೆ ಗೌರವಾರ್ಪಣೆ ಸಮಾರಂಭದಲ್ಲಿ ಸ್ವರ್ಣೋದ್ಯಮಿ ಡಾ. ಬಿ.ಗೋವಿಂದನ್, ಸಮಾಜಸೇವಕ ಎಲ್.ಆರ್ ಪೋತ್ತಿ, ಸಾಹಿತಿ ಪ್ರಭಾಕರ ರಾವ್ ಬನದಗದ್ದೆ, ಕವಿ ಉದನೇಶ್ವರ ಪ್ರಸಾದ್ ಮೂಲಡ್ಕ, ಪತ್ರಕರ್ತ ಪುರುಷೋತ್ತಮ ಪೆರ್ಲ ಅವರನ್ನು ಸನ್ಮಾನಿಸಲಾಗುವುದು.
ನಂತರ ನಡೆಯುವ ಕವಿಗೋಷ್ಟಿಯಲ್ಲಿ ಕಾಸರಗೋಡು ಸರ್ಕಾರಿ ಕಲೇಜು ಉಪನ್ಯಾಸಕ ಡಾ. ರತ್ನಾಕರ ಮಲ್ಲಮೂಲೆ ಅಧ್ಯಕ್ಷತೆ ವಹಿಸುವರು. ಗಡಿನಾಡಿನಲ್ಲಿ ಭಾಷಾ ವೈವಿಧ್ಯ ಎಂಬ ವಿಷಯದ ಬಗ್ಗೆ ನಡೆಯುವ ವಿಚಾರಗೋಷ್ಠಿಯಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ. ರಾಮ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕ್ರತಿಕ ಕಲಾಪ್ರಕಾರಗಳು ಪ್ರದರ್ಶನಗೊಳ್ಳುವುದು. ಸಂಜೆ 5ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕೇರಳ ಸರ್ಕಾರದ ಸಾರಿಗೆ ಸಚಿವ ಆಂಟನಿ ರಾಜು ಉದ್ಘಾಟಿಸುವರು. ಡಾ. ಸಿ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ಚಿತ್ರನಟ, ಶಾಸಕ ಮುಕೇಶ್, ಶಾಸಕರಾದ ಎನ್.ಎ ನೆಲ್ಲಿಕುನ್ನು, ಸಿ.ಎಚ್. ಕುಞಂಬು, ಎ.ಕೆ.ಎಂ ಅಶ್ರಫ್, ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ಅನಂತಪುರಿ ಗಡಿನಾಡ ಸಾಂಸ್ಕøತಿಕ ಉತ್ಸವ ಪ್ರಧಾನ ಸಂಚಾಲಕ ಎ.ಆರ್. ಸುಬ್ಬಯ್ಯಕಟ್ಟೆ ಮುಂತಾದವರು ಅತಿಥಿಗಳಾಗಿ ಭಾಗವಹಿಸುವರು.
ತಿರುವನಂತಪುರದಲ್ಲಿ 'ಅನಂತಪುರಿ ಗಡಿನಾಡ ಸಾಂಸ್ಕøತಿಕ ಉತ್ಸವ-2023'
0
ಫೆಬ್ರವರಿ 05, 2023