ಕುಂಬಳೆ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ ಮತ್ತು ರಜತ ಮಹೋತ್ಸವ ಫೆ.24 ಮತ್ತು 25 ರಂದು ಕಾಸರಗೋಡು ನಗರಸಭಾ ಸಭಾಂಗಣದಲ್ಲಿ ನಡೆಯಲಿದೆ.
ಫೆ.24 ರಂದು ಬೆಳಗ್ಗೆ 9 ಕ್ಕೆ ಬೀರಂತಬೈಲಿನ ಕನ್ನಡ ಅಧ್ಯಾಪಕರ ಭವನದಿಂದ ಮೆರವಣಿಗೆ, 10 ಕ್ಕೆ ಕಾರ್ಯಕ್ರಮವನ್ನು ಕರ್ನಾಟಕದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ. ಅಧ್ಯಕ್ಷತೆ ವಹಿಸುವರು. ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್, ಶಾಸಕರಾದ ಎನ್.ಎ.ನೆಲ್ಲಿಕುನ್ನು, ಸಿ.ಎಚ್.ಕುಂಞಂಬು, ಎ.ಕೆ.ಎಂ.ಅಶ್ರಫ್ ಅತಿಥಿಗಳಾಗಿ ಭಾಗವಹಿಸುವರು. ಖ್ಯಾತ ಚಿಂತಕ ಅರವಿಂದ ಚೊಕ್ಕಾಡಿ ಮುಖ್ಯ ಭಾಷಣ ಮಾಡುವರು. ಸಿ.ಕೆ.ವಾಸು, ನಂದಿಕೇಶನ್ ಎನ್, ದಿನೇಶ್ ವಿ, ಅಗಸ್ಟಿನ್ ಬರ್ನಾರ್ಡ್, ಶಶಿಧರನ್ ಅತಿಥಿಗಳಾಗಿ ಭಾಗವಹಿಸುವರು. ಅಪರಾಹ್ನ 2 ರಿಂದ ಅಧ್ಯಾಪಕರಿಂದ ನಾಟಕ ಪ್ರದರ್ಶನಗೊಳ್ಳಲಿದೆ. 3 ರಿಂದ ಪ್ರತಿನಿಧಿ ಸಮ್ಮೇಳನ ನಡೆಯಲಿದ್ದು, ಶ್ರೀನಿವಾಸ ರಾವ್ ಪಿ.ಬಿ. ಅಧ್ಯಕ್ಷತೆ ವಹಿಸುವರು. ಸಂಜೆ 4 ರಿಂದ ಅಧ್ಯಾಪಕರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಫೆ.25 ರಂದು ಬೆಳಗ್ಗೆ 10 ಕ್ಕೆ ರಜತ ಮಹೋತ್ಸವವನ್ನು ಉದ್ಯಮಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸುವರು. ಅಂಕಣಕಾರ ನರೇಂದ್ರ ರೈ ದೇರ್ಲ ಮುಖ್ಯ ಭಾಷಣ ಮಾಡುವರು. ಈ ಸಂದರ್ಭದಲ್ಲಿ ಸಂಘಟನೆಯ ಪೂರ್ವ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿಗಳಿಗೆ ಗೌರವಾರ್ಪಣೆ ನಡೆಯಲಿದೆ. 11.30 ರಿಂದ ವಿಚಾರಗೋಷ್ಠಿ, ಮಧ್ಯಾಹ್ನ 2 ರಿಂದ ಯಕ್ಷಗಾನ, 3 ರಿಂದ ಸಮಾರೋಪ ಸಮಾರಂಭ ನಡೆಯಲಿದೆ.
ಫೆ.24-25 : ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ
0
ಫೆಬ್ರವರಿ 21, 2023