HEALTH TIPS

2 ಲಕ್ಷ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕೇಂದ್ರ ಸಂಪುಟ ಒಪ್ಪಿಗೆ

        ನವದೆಹಲಿ : ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಎರಡು ಲಕ್ಷ ಹೊಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಎಸಿಎಸ್‌) ಮತ್ತು ಡೇರಿ- ಮೀನುಗಾರಿಕಾ ಸಹಕಾರ ಸಂಘಗಳನ್ನು ತೆರೆಯಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

              ಇಲ್ಲಿಯವರೆಗೆ ಸಹಕಾರ ಸಂಘಗಳು ತೆರೆಯದ ಗ್ರಾಮಗಳು ಮತ್ತು ಪಂಚಾಯ್ತಿಗಳಲ್ಲಿ ಇವುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.

ಈ ಮೂಲಕ ದೇಶದಲ್ಲಿ ಸಹಕಾರ ಚಳವಳಿಯನ್ನು ಬಲಿಷ್ಠಗೊಳಿಸುವ ಉದ್ದೇಶ ಕೇಂದ್ರ ಸರ್ಕಾರದ್ದಾಗಿದೆ.

            ದೇಶದಲ್ಲಿ ಒಟ್ಟು 99,000 ಪಿಎಸಿ ಎಸ್‌ಗಳಿದ್ದು, ಅವುಗಳಲ್ಲಿ 63,000 ಕ್ರಿಯಾಶೀಲವಾಗಿವೆ. ಉಳಿದಂತೆ ದೇಶದ 1.6 ಲಕ್ಷ ಪಂಚಾಯ್ತಿಗಳಲ್ಲಿ ಪಿಎಸಿಎಸ್‌ಗಳಿಲ್ಲ. ಹಾಗೆಯೇ ಸುಮಾರು 2 ಲಕ್ಷ ಪಂಚಾಯ್ತಿಗಳಲ್ಲಿ ಯಾವುದೇ ಡೇರಿ ಸಹಕಾರ ಸಂಘಗಳಿಲ್ಲ.

                  ದೇಶದಲ್ಲಿ ಸಹಕಾರಿ ಆಂದೋಲನ ವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಸಂಪುಟ ಈ ಯೋಜನೆಗೆ ಅನುಮೋದನೆ ನೀಡಿದೆ.

            'ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಬಾರ್ಡ್‌, ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ (ಎನ್‌ಡಿಡಿಬಿ) ಮತ್ತು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್‌ಎಫ್‌ಡಿಬಿ) ಕ್ರಿಯಾ ಯೋಜನೆ ಸಿದ್ಧ ಪಡಿಸಲಿದೆ' ಎಂದು ಪ್ರಕಟಣೆ ತಿಳಿಸಿದೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries