ಗುವಾಹಟಿ: ಅರುಣಾಚಲ ಪ್ರದೇಶದ ಪಶ್ಚಿಮ ಭಾಗದಲ್ಲಿ ಭಾನುವಾರ 3.8 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂತಾನ್ ಗಡಿಯ ಸಮೀಪವಿರುವ ಪಶ್ಚಿಮ ಕಮೆಂಗ್‌ನಲ್ಲಿ ಮಧ್ಯಾಹ್ನ 12.12 ಕ್ಕೆ ಭೂಕಂಪ ಸಂಭವಿಸಿದ್ದು, ಭೂಮಿಯಿಂದ 10 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.