ಕ್ಯಾಲಿಕಟ್: ಅಬುಧಾಬಿಯಿಂದ ಕೋಝಿಕ್ಕೋಡ್ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಟೇಕ್ ಆಫ್ ಆದ ಕೂಡಲೇ ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಮತ್ತೆ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ಬಿ737-800 ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ತಿಳಿಸಿದೆ.
ಡಿಜಿಸಿಎ ಪ್ರಕಾರ, ವಿಮಾನ ಟೇಕಾಫ್ ಆಗುವಾಗ 184 ಪ್ರಯಾಣಿಕರಿದ್ದರು.
" ಟೇಕ್ ಆಫ್ ಆಗಿ 1,000 ಅಡಿಗಳಿಗೆ ಏರಿದ ನಂತರ, ಪೈಲಟ್ ಎಂಜಿನ್ ಒಂದರಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ಪತ್ತೆ ಹಚ್ಚಿದರು ಹಾಗೂ ಅಬುಧಾಬಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಲು ನಿರ್ಧರಿಸಿದರು" ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಎಎನ್ಐಗೆ ತಿಳಿಸಿದೆ.
ವಿಮಾನವು ಅಬುಧಾಬಿ ವಿಮಾನ ನಿಲ್ದಾಣಕ್ಕೆ ಮರಳಿದೆ ಎಂದು DGCA ತಿಳಿಸಿದೆ.