ಕಾಸರಗೋಡು: ಗಡಿನಾಡಿನಲ್ಲಿ ಕನ್ನಡದ ಬಗ್ಗೆ ಹೆಚ್ಚುತ್ತಿರುವ ಅವಗಣನೆ ಭಾಷೆ ಮತ್ತು ಸಂಸ್ಕøತಿಗೆ ಮಾರಕವಾಗುತ್ತಿದ್ದು, ಸಮಸ್ತ ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಸಂಘಟಿತ ಪ್ರಯತ್ನದಿಂದ ಇದರ ವಿರುದ್ಧ ಗೆಲುವು ಸಾಧಿಸಲು ಸಾಧ್ಯ ಎಂದು ಕರ್ನಾಟಕ ಸಮಿತಿ ಅಧ್ಯಕ್ಷ, ವಕೀಲ ಕೆ.ಮುರಳೀಧರ ಬಳ್ಳಕ್ಕುರಾಯ ತಿಳಿಸಿದ್ದಾರೆ.
ಅವರು ಕಾಸರಗೋಡು ನಗರ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ ಮತ್ತು ರಜತಮಹೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಶ್ರೀನಿವಾಸ ರಾವ್ ಪಿ. ಬಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರಾದ ಡಿ. ಮಹಾಲಿಂಗೇಶ್ವರ ರಾಜ್, ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ಸತ್ಯನಾರಾಯಣ ಕೆ, ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷರುಗಳಾದ ಸತೀಶ್ ಕೆ, ಟಿ. ಡಿ. ಸದಾಶಿವ ರಾವ್, ಮಹಾಲಿಂಗೇಶ್ವರ ಭಟ್ ಎಂ. ವಿ, ವಿಶಾಲಾಕ್ಷ ಪುತ್ರಕಳ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಸಮ್ಮೇಳನದ ಠರಾವು ಮಂಡಿಸಿದರು. ಈ ಸಂದರ್ಭ ರಜತ ಮಹೋತ್ಸವದ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಉಪಾಧ್ಯಕ್ಷ ಸುಕೇಶ್ ಎ ಸ್ವಾಗತಿಸಿದರ. ಕಾರ್ಯದರ್ಶಿ ಪ್ರದೀಪ್ ಕೆ. ವಿ ಕಾರ್ಯಕ್ರಮ ನಿರೂಪಿಸಿದರು. ಕುಂಬಳೆ ಉಪಜಿಲ್ಲಾ ಘಟಕದ ಉಪಾಧ್ಯಕ್ಷ ರಾಜೇಶ್ ಉಬ್ರಂಗಳ ವಂದಿಸಿದರು.
ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ, ರಜತ ಮಹೋತ್ಸವ ಸಮಾರೋಪ
0
ಫೆಬ್ರವರಿ 28, 2023