HEALTH TIPS

ಧರ್ಮೇಂದ್ರ ಪ್ರಧಾನ್‌ಗೆ ಉಸ್ತುವಾರಿ, ಅಣ್ಣಾಮಲೈಗೆ ಸಹ ಉಸ್ತುವಾರಿ ಕೊಟ್ಟ ಬಿಜೆಪಿ

 

              ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ನೇಮಿಸಿದೆ.

                     ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಲಹೆಯಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ಈ ನೇಮಕದ ಆದೇಶವನ್ನು ಹೊರಡಿಸಿದ್ದಾರೆ.

             ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಧರ್ಮೇಂದ್ರ ಪ್ರಧಾನ್ ಅವರು ಪ್ರಸ್ತುತ ಕೇಂದ್ರ ಶಿಕ್ಷಣ ಮಂತ್ರಿಯಾಗಿದ್ದಾರೆ. ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದ ಕೆ.ಅಣ್ಣಾಮಲೈ ಅವರು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries