ನವದೆಹಲಿ: ಲಡಾಖ್‌ನ ಜನರ ಜೀವನವನ್ನು ಉತ್ತಮಗೊಳಿಸಲು ತಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಪ್ರತಿಪಾದಿಸಿದ್ದಾರೆ.
ಲಡಾಖ್‌ಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಒದಗಿಸುವ 4.1 ಕಿಮೀ ಉದ್ದದ ಶಿಂಕುನ್ ಲಾ ಸುರಂಗ ನಿರ್ಮಾಣಕ್ಕೆ ಮೋದಿ ಸರ್ಕಾರ 1681.51 ₹ಕೋಟಿ ಒದಗಿಸಿದ್ದು, 2025ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಿದೆ ಎಂದು ಲಡಾಖ್ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್‌ಗ್ಯಾಲ್ ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿಕೊಂಡಿರುವ ನರೇಂದ್ರ ಮೋದಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.
"ಲಡಾಖ್‌ನ ಅತ್ಯಂತ ಹಿಂದುಳಿದ ಪ್ರದೇಶವಾದ ಝನ್‌ಸ್ಕರ್ ಲುಂಗ್ನಾಕ್ ಕಣಿವೆಯ ನಿವಾಸಿಗಳು ಮೋದಿ ಅವರ ಈ ನಿರ್ಧಾರವನ್ನು ಸ್ವಾಗತಿಸಿ, ಧನ್ಯವಾದ ಸಲ್ಲಿಸಿದ್ದಾರೆ" ಎಂದು ಕೇಂದ್ರಾಡಳಿತ ಪ್ರದೇಶದ ಲೋಕಸಭಾ ಸಂಸದರು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ನರೇಂದ್ರ ಮೋದಿ , "ಲಡಾಖ್ ಜನರ ಜೀವನವನ್ನು ಸುಧಾರಿಸಲು ನಮ್ಮ ಸರ್ಕಾರ ಬದ್ಧವಾಗಿದೆ" ಎಂದು ತಿಳಿಸಿದ್ದಾರೆ.