ಪೆರ್ಲ: ಪೆರ್ಲ ನಾಲಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಲಲಿತಕಲಾ ಸ್ಪರ್ಧೆಗಳು ನಡೆದವು. ಕಾಲೇಜು ಆಡಳಿತ ಮಂಡಳಿ ಸದಸ್ಯೆ ಶ್ಯಾಮಲಾ ಪತ್ತಡ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ, ಪ್ರಾಧ್ಯಾಪಕ ಕೇಶವ ಶರ್ಮಾ ಕೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ಕಲಾ ಸಾಹಿತ್ಯ ರಂಗದ ಅಧಿಕಾರಿ ಶ್ರೀನಿಧಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಲಾ ಸಾಹಿತ್ಯ ರಂಗದ ಸಹಾಯಕ ಅಧಿಕಾರಿ ಅನುಪಮ ವಂದಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಕಾವ್ಯಾ ಚಂದ್ರನ್ ವಿ.ನಿರೂಪಿಸಿದರು. ಪ್ರಾಧ್ಯಾಪಕರು, ಪ್ರಾಧ್ಯಾಪಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿವಿಧ ಕಲಾ ಸ್ಪರ್ಧೆಗಳು ನಡೆದವು.