ಕಾಸರಗೋಡು: ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಜಿಲ್ಲೆಯ ನಾನಾ ದೇಗುಲಗಳಲ್ಲಿ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀದೇವರ ಬಲಿ ಉತ್ಸವ, ಶಿವಪಂಚಾಕ್ಷರಿ ಮಂತ್ರಜಪ, ಅಭಿಷೇಕ ನಡೆಯಿತು. ಗುಡ್ಡೆ ಶ್ರೀ ಮಹಾದೇವ ದೇವಸ್ಥಾನದಲ್ಲಿ ವಿಶೇಷ ಅಭಿಷೇಕ, ಭಜನೆ ನೆರವೇರಿತು. ಪೆರ್ಲ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ ಶ್ರೀದೇವರಿಗೆ ಶತರುದ್ರಾಭಿಷೇಕ, ಬಲಿವಾಡು ಕೂಟ, ಶಿವರಾತ್ರಿ ಭಜನೆ ನಡೆಯಿತು.
ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ನೆರವೇರಿತು. ತೃಕ್ಕನ್ನಾಡು ಶ್ರೀ ತ್ರಯಂಬಕೇಶ್ವರ ದೇವಸ್ಥಾನ, ಕಾಸರಗೋಡು ಹೊನ್ನೆಮೂಲೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಕೂಡ್ಲು ಶ್ರೀ ಶೈಲ ಕ್ಷೇತ್ರ, ಕುಂಬಳೆ ಆರಿಕ್ಕಾಡಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಪುತ್ತಿಗೆ ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕಿದೂರು ಶ್ರೀ ಮಹಾದೇವ ದೇವಸ್ಥಾನ, ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನ, ಬಾಕ್ರಬೈಲು ಶ್ರೀ ಸೂರ್ಯೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶಿವರಾತ್ರಿ ಮಹೋತ್ಸವ ನಡೆಯಿತು.