ಬದಿಯಡ್ಕ : ಆಜಾದಿಕ ಅಮೃತ ಮಹೋತ್ಸವದ ನಿಮಿತ್ತ 'ಜನ್ಮಭೂಮಿ ಕಾಸರಗೋಡು' ಜಿಲ್ಲೆಯ ಕನ್ನಡ ವಿದ್ಯಾರ್ಥಿಗಳಿಗಾಗಿ ಅಮೃತಂ ಸಂಭೂಮಿ ಎಂಬ ಹೆಸರಿನಲ್ಲಿ ಜನ್ಮಭೂಮಿ ವಿಜ್ಞಾನೋತ್ಸವ ಆಯೋಜಿಸಲಾಯಿತು.
ಕಾಸರಗೋಡಿನ ಬಿಇಎಂ ಹೈಯರ್ ಸೆಕೆಂಡರಿ ಶಾಲೆ, ಕೂಡ್ಲು ಗೋಪಾಲಕೃಷ್ಣ ಪ್ರೌಢಶಾಲೆ ಮತ್ತು ಬದಿಯಡ್ಕ ಪೆರಡಾಲದ ನವಜೀವನ ಪ್ರೌಢಶಾಲೆಯಲ್ಲಿ ಪರೀಕ್ಷೆ ಆಯೋಜಿಸಲಾಗಿತ್ತು.
ಕಾಸರಗೋಡು, ಮಂಜೇಶ್ವರ, ಕುಂಬಳೆ ಉಪ ಜಿಲ್ಲೆಗಳಿಂದ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಪರೀಕ್ಷೆ ಆಯೋಜಿಸಿತ್ತು. ಕಾಸರಗೋಡು ಜಿಲ್ಲೆಯ ರಾಷ್ಟ್ರೀಯ ಶಿಕ್ಷಕರ ಪರಿಷತ್ತಿನ ಸಿಬ್ಬಂದಿ ಹಾಗೂ ಶಿಕ್ಷಕರು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಿರ್ವಹಿಸಿದರು. ಪ್ರಥಮ ಮತ್ತು ದ್ವಿತೀಯ ಸ್ಥಾನಕ್ಕೆ ಆಯ್ಕೆಯಾಗುವ ವಿದ್ಯಾರ್ಥೀಗಳಿಗೆ ಕ್ರಮವಗಿ 20,000 ಮತ್ತು 10,000 ನಗದು ಮತ್ತು ಮೂವತ್ತು ಮಂದಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಗುತ್ತಿದೆ.