ನವದೆಹಲಿ: ವೈಎಸ್‌ಆರ್‌ಸಿಪಿ ಸಂಸದ ಮಾಗುಂಟ ಶ್ರೀನಿವಾಸ ರೆಡ್ಡಿ ಅವರ ಪುತ್ರ ಮಾಗುಂಟ ರಾಘವ ಅವರನ್ನು ಲಿಕ್ಕರ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಮದ್ಯದ ದಂಧೆಗೆ ಸಂಬಂಧಿಸಿದಂತೆ ಮಾಗುಂಟ ಶ್ರೀನಿವಾಸಲು ರೆಡ್ಡಿ ಅವರನ್ನು ಭೇಟಿ ಮಾಡಿದ್ದನ್ನು ಇಡಿ ಉಲ್ಲೇಖಿಸಿದೆ.
ತೆಲಂಗಾಣ ಮೂಲದ ಚಾರ್ಟರ್ಡ್ ಅಕೌಂಟೆಂಟ್, ಕೆಸಿಆರ್ ಅವರ ಪುತ್ರಿ ಕೆ.ಕವಿತಾ ಅವರ ಮಾಜಿ ಆಡಿಟರ್ ಬುಚ್ಚಿಬಾಬು ಗೋರಂಟ್ಲಾ ಅವರನ್ನು ದೆಹಲಿ ಮದ್ಯ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದ ಕೆಲವೇ ದಿನಗಳಲ್ಲಿ ಮಾಗುಂಟ ರಾಘವ ಅವರ ಬಂಧನವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 12 ರಂದು ಹೈದರಾಬಾದ್‌ನಲ್ಲಿ ಸಿಬಿಐ ತಂಡವು ಕೆ ಕವಿತಾ ಅವರನ್ನು ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.
ಇಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಒಂಬತ್ತು ಜನರನ್ನು ಈವರೆಗೆ ಬಂಧಿಸಿದ್ದು, ನ್ಯಾಯಾಲಯಕ್ಕೆ ಎರಡು ಚಾರ್ಜ್ ಶೀಟ್ ಸಲ್ಲಿಸಿದೆ.