ನವದೆಹಲಿ: 'ಅಲ್‌ಕೈದಾ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪಾಲ್ಗರ್ ಹಾಗೂ ಥಾಣೆಯಲ್ಲಿ ಎನ್‌ಐಎ ಅಧಿಕಾರಿಗಳು ಶೋಧ ನಡೆಸಿದ್ದಾರೆ' ಎಂದು ವಕ್ತಾರರೊಬ್ಬರು ಶನಿವಾರ ಹೇಳಿದ್ದಾರೆ.
'ಶೋಧದ ವೇಳೆ ಅಧಿಕಾರಿಗಳಿಗೆ ಕೆಲ ದಾಖಲೆಗಳು ಹಾಗೂ ಡಿಜಿಟಲ್ ಉಪಕರಣಗಳು ದೊರೆತಿದ್ದು ಅವುಗಳನ್ನು ಜಪ್ತಿ ಮಾಡಿದ್ದಾರೆ' ಎಂದೂ ತಿಳಿಸಿದ್ದಾರೆ.