ನವದೆಹಲಿ: ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಕಾಂಗ್ರೆಸ್ ಸಂಸದ ರಜನಿ ಅಶೋಕ್ ರಾವ್ ಪಾಟೀಲ್ ಅವರನ್ನು ಪ್ರಸಕ್ತ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ಗದ್ದಲ ಚಿತ್ರೀಕರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದ ಧನಕರ್, ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಂತೆ ರಾಜಕೀಯ ಪಕ್ಷಗಳ ನಾಯಕರನ್ನು ಕೇಳಿದರು.