ಚೆನ್ನೈ: ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿಆರ್ ಕೇಶವನ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವ ಕೇಶವನ್ ಅವರು, ಕಳೆದ ಎರಡು ದಶಕಗಳಿಂದ ಪಕ್ಷಕ್ಕಾಗಿ ದುಡಿಯಲು ಕಾರಣವಾದ ಯಾವುದೇ ಮೌಲ್ಯಗಳ ಕುರುಹು ಈಗ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ಪಕ್ಷವು ಪ್ರಸ್ತುತ ಏನನ್ನು ಸಂಕೇತಿಸುತ್ತದೆಯೋ ಅದನ್ನು ಒಪ್ಪಲು ನನ್ನಿಂದ ಸಾಧ್ಯವಿಲ್ಲ. ಹೀಗಾಗಿಯೇ ರಾಷ್ಟ್ರೀಯ ಮಟ್ಟದ ಸಾಂಸ್ಥಿಕ ಜವಾಬ್ದಾರಿಯನ್ನು ನಿರಾಕರಿಸಿದ್ದೇನೆ ಮತ್ತು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿಲ್ಲ ಎಂದು ಕೇಶವನ್ ಹೇಳಿದ್ದಾರೆ.
ನಾನು ಹೊಸ ಮಾರ್ಗವನ್ನು ಕಂಡುಕೊಳ್ಳುವ ಸಮಯ ಬಂದಿದೆ ಮತ್ತು ಆದ್ದರಿಂದ ನಾನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ತಮಿಳುನಾಡು ಕಾಂಗ್ರೆಸ್ ಸಮಿತಿ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಸ್ಥಾನಕ್ಕೆ ನನ್ನ ರಾಜೀನಾಮೆಯನ್ನು ಸೂಕ್ತ ಪ್ರಾಧಿಕಾರಕ್ಕೆ ಸಲ್ಲಿಸಿದ್ದೇನೆ" ಎಂದು ರಾಜೀನಾಮೆ ಪತ್ರದಲ್ಲಿ ಕೇಶವನ್ ಬರೆದಿದ್ದಾರೆ.