HEALTH TIPS

ತ್ರಿಪುರ ಚುನಾವಣೆ ದಿನದಂದು ಮತಯಾಚನೆ: ಕಾಂಗ್ರೆಸ್, ಬಿಜೆಪಿಗೆ ನೋಟಿಸ್ ಜಾರಿ

 

                  ನವದೆಹಲಿ: ತ್ರಿಪುರ ವಿಧಾನಸಭೆ ಚುನಾವಣೆನಿನ್ನೆ ನಡೆದಿದ್ದು  , ಈ ಸಂದರ್ಭದಲ್ಲಿ ಟ್ವಿಟರ್‌ನಲ್ಲಿ ಮತಯಾಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್, ಬಿಜೆಪಿ ಪಕ್ಷಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

                ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಿಲೀಪ್ ಸೈಕಿಯಾ ಅವರಿಗೂ ನೋಟಿಸ್ ಜಾರಿ ಮಾಡಲಾಗಿದೆ.

                60 ಸದಸ್ಯ ಬಲದ ತ್ರಿಪುರ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಈಶಾನ್ಯ ರಾಜ್ಯದಲ್ಲಿ ಮತದಾನ ನಡೆಯುತ್ತಿರುವಾಗ ಟ್ವಿಟರ್‌ನಲ್ಲಿ ಮತ ಯಾಚಿಸಿದ್ದು, ಚುನಾವಣಾ ನಿಯಮ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

                 ಅಲ್ಲದೆ ಶುಕ್ರವಾರ ಸಂಜೆ 5 ಗಂಟೆಯೊಳಗೆ ಉತ್ತರಿಸುವಂತೆ ತಿಳಿಸಲಾಗಿದೆ.

                ಉತ್ತಮ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ಹಾಕಿ ಎಂದು ಬಿಜೆಪಿಯ ಟ್ವಿಟರ್ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಮತ್ತೊಂದೆಡೆ ಕಾಂಗ್ರೆಸ್ ಟ್ವೀಟ್‌ನಲ್ಲಿ, ತ್ರಿಪುರದ ಜನತೆ ಕಾಂಗ್ರೆಸ್‌ಗೆ ಮತ ಚಲಾಯಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಬರಲಿದೆ ಎಂದು ಉಲ್ಲೇಖ ಮಾಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries