ಕೊಲ್ಲಂ: ಕೊಲ್ಲಂ ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ಬಾಂಬ್ ಬೆದರಿಕೆ ಹಾಕಲಾಗಿದೆ. ಇಂದು ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿಗೆ ಬಂದ ಪತ್ರದಲ್ಲಿ ಬೆದರಿಕೆ ಸಂದೇಶವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪೆÇಲೀಸರಿಗೆ ಮಾಹಿತಿ ನೀಡಿದ್ದು, ಬಾಂಬ್ ಸ್ಕ್ವಾಡ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ತಪಾಸಣೆ ವೇಳೆ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಪೆÇಲೀಸರು ತಿಳಿಸಿದ್ದಾರೆ. ಚಿನ್ನಕಡ ಪ್ರಧಾನ ಅಂಚೆ ಕಚೇರಿಯಿಂದ ಪತ್ರ ರವಾನೆಯಾಗಿದೆ ಎಂದು ವರದಿಯಾಗಿದೆ. ಬೆದರಿಕೆ ಸಂದೇಶ ಕಳುಹಿಸಿದವರಿಗಾಗಿ ತನಿಖೆ ಆರಂಭಿಸಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲಾಧಿಕಾರಿಗೆ ಬಾಂಬ್ ಬೆದರಿಕೆ
0
ಫೆಬ್ರವರಿ 03, 2023
Tags