ತಿರುವನಂತಪುರಂ: ರಾಜ್ಯದಲ್ಲಿ ಇಂಧನದ ಸೆಸ್ ದರ ಹೆಚ್ಚಿಸಿರುವ ಬೆನ್ನಿಗೇ ವಿದ್ಯಾರ್ಥಿಗಳ ಪ್ರಯಾಣ ದರ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಖಾಸಗೀ ಬಸ್ ಮಾಲೀಕರು ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದಾರೆ.
ಮಾರ್ಚ್ 31 ರೊಳಗೆ ವಿದ್ಯಾರ್ಥಿಗಳ ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಲಾಗಿದೆ.
ಪ್ರಸ್ತುತ ವಿದ್ಯಾರ್ಥಿಗಳಿಗೆ ಅತ್ಯಂತ ಕಡಿಮೆ ದರ ರೂ.1 ರಂತೆ ಪಡೆಯಲಾಗುತ್ತಿದ್ದು, ಇದನ್ನು ರೂ.5 ಕ್ಕೆ ಹೆಚ್ಚಿಸಬೇಕು ಎಂದು ಮಾಲೀಕರು ಆಗ್ರಹಿಸುತ್ತಿದ್ದಾರೆ. ಇಲ್ಲದಿದ್ದಲ್ಲಿ ಏಪ್ರಿಲ್ ಮೊದಲ ವಾರದಿಂದ ಬಸ್ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ.
ಇದೇ 28ರಂದು ಎಲ್ಲ ಕಲೆಕ್ಟರೇಟ್‍ಗಳ ಮುಂದೆ ಧರಣಿ ಹಾಗೂ ಪ್ರತಿಭಟನೆ ನಡೆಸುವುದಾಗಿ ಖಾಸಗಿ ಬಸ್ ಆಪರೇಟರ್ಸ್ ಫೆಡರೇಷನ್ ತಿಳಿಸಿದೆ.
ವಿದ್ಯಾರ್ಥಿಗಳ ಪ್ರಯಾಣ ದರ ಹೆಚ್ಚಿಸಬೇಕು; ಖಾಸಗಿ ಬಸ್ ಮಾಲೀಕರಿಂದ ಮುಷ್ಕರಕ್ಕೆ ಸಿದ್ಧತೆ
0
ಫೆಬ್ರವರಿ 12, 2023
Tags