ಕನೌಜ್: ಕನೌಜ್ ನ ಸರಾಯ್ ಪ್ರಯಾಗ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಶನಿವಾರ ರಾತ್ರಿ ಗುರ್ಸಹೈಗಂಜ್ ಪ್ರದೇಶದಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನು ಕೆಲವು ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ.
ದುಷ್ಕರ್ಮಿಗಳು ಶಾಂತಿ ಕದಡುವ ಯತ್ನ ನಡೆಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ಹೇಳಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹಾಗೂ ಹೊಸ ಪ್ರತಿಮೆ ಸ್ಥಾಪಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
ಹಾನಿಗೊಳಗಾದ ಪ್ರತಿಮೆಯ ಜಾಗದಲ್ಲಿ ಹೊಸ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಎಸ್ಪಿ ಹೇಳಿದ್ದಾರೆ.