ನವದೆಹಲಿ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ತರುವ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕಾನೂನು ಸಚಿವ ಕಿರಣ್ ರಿಜಿಜು ಅವರು ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ವಿವಿಧ ವಿಷಯಗಳ ಪರಿಶೀಲನೆ ನಡೆಸಿ ಶಿಫಾರಸುಗಳನ್ನು ಮಾಡುವಂತೆ 21 ನೇ ಕಾನೂನು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.