ಕುಂಬಳೆ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆಯಲ್ಲಿ 2022-23ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿದಾಯಕೂಟ ಸಮಾರಂಭ ಜರಗಿತು. ಇದರೊಂದಿಗೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕಲೆ, ಕ್ರೀಡೆ, ವೃತ್ತಿಶಿಕ್ಷಣ, ಗಣಿತಮೇಳ ಇತ್ಯಾದಿ ರಂಗಗಳಲ್ಲಿ ಶಾಲೆಯನ್ನು ಪ್ರತಿನಿಧೀಕರಿಸಿ ರಾಜ್ಯಮಟ್ಟದಲ್ಲಿ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭವನ್ನೂ ಹಮ್ಮಿಕೊಳ್ಳಲಾಗಿತ್ತು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಜೋನ್ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿನೋದ್ ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸುವುದರೊಂದಿಗೆ ಅತಿಯಾದ ಮೊಬೈಲ್ ಫೆÇೀನ್ ಬಳಕೆ ಹಾಗೂ ಮಾದಕ ವ್ಯಸನ ಜಾಲದ ಬಗ್ಗೆ ಎಚ್ಚರಿಕೆಯ ಮಾತುಗಳನ್ನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಕಯ್ಯಾರ್ ಡಾನ್ ಬೋಸ್ಕೋ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪೀಟರ್ ರೊಡ್ರಿಗಸ್ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಮುಂದಿನ ಹಂತಕ್ಕೆ ಶುಭವನ್ನು ಹಾರೈಸಿದರು.
ಶಾಲಾ ವ್ಯವಸ್ಥಾಪಕ ಶಂಕರನಾರಾಯಣ ಭಟ್ ಎನ್, ಹೈಯ್ಯರ್ ಸೆಕೆಂಡರಿ ಪ್ರಾಂಶುಪಾಲ ರಾಮಚಂದ್ರ ಭಟ್ ಎನ್ ಶುಭಾಶಂಸನೆಗೈದರು. ಮುಖ್ಯೋಪಾಧ್ಯಾಯ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಪುμÁ್ಪವತಿ ಉಪಸ್ಥಿತರಿದ್ದರು. ಅನೇಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅನುಭವಗಳನ್ನು ಹಂಚಿಕೊಂಡರು.
ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಶಾಲಾ ವಿದ್ಯಾರ್ಥಿ ನಾಯಕಿ ಕು.ಹರ್ನಿತ ಸ್ವಾಗತಿಸಿದಳು. ಕು. ಸೋನಾಲ್ ಜೇಶಲ್ ಕ್ರಾಸ್ತಾ ವಂದಿಸಿದಳು. ಕು. ಲಾಸ್ಯ ವಿ ಕುಂಬಳೆ ಹಾಗೂ ಕು. ಶುಭಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ಎಲ್ಲಾ ಅಧ್ಯಾಪಕ, ಸಿಬ್ಬಂದಿ ವರ್ಗದವರು ಸಹರಿಸಿದರು.