ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶದ ವರ್ಚಸ್ಸು ಜಾಗತಿಕಮಟ್ಟದಲ್ಲಿ ಹೆಚ್ಚುತ್ತಿರುವುದನ್ನು ಜೀರ್ಣಿಸಿಕೊಳ್ಳಲು ಕಾಂಗ್ರೆಸ್ ಪಕ್ಷಕ್ಕೆ ಆಗುತ್ತಿಲ್ಲ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕತ್ವದಲ್ಲಿ ವಿರೋಧ ಪಕ್ಷಗಳು ಸರ್ಕಾರ ರಚನೆ ಮಾಡಲಿವೆ ಎಂಬ ಮಲ್ಲಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಮುಖ್ತಾರ್ ಅಬ್ಬಾಸ್ ನಖ್ವಿ ಲೇವಡಿ ಮಾಡಿದರು. ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ಬೆಳವಣಿಗೆ ಕಾಣಲು, ಕುತಂತ್ರ ಮಾಡುತ್ತಿದೆ ಎಂದು ಅವರು ವ್ಯಂಗ್ಯವಾಡಿದರು.
ದೇಶದಲ್ಲಿ ಮೊದಲ ಬಾರಿಗೆ ಕಾಂಗ್ರೆಸೇತರ ಸರ್ಕಾರ ರಚನೆಯಾಗಿರುವುದು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ, ಸಮೃದ್ಧಿ, ಸ್ಥಿರತೆ ಮತ್ತು ವಿಶ್ವಾಸಾರ್ಹತೆ ಹೆಚ್ಚಿಸಿದ್ದಾರೆ. ಈ ಅಂಶವನ್ನು ಜೀರ್ಣಿಸಿಕೊಳ್ಳಲು ಕಾಂಗ್ರೆಸ್‌ಗೆ ಸಾಧ್ಯವಾಗುತ್ತಿಲ್ಲ ಎಂದು ನಖ್ವಿ ಹೇಳಿದರು.
ಮೈತ್ರಿ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ನಖ್ವಿ ಅವರ ಕಾಂಗ್ರೆಸ್ ಪಕ್ಷದ ಕುತಂತ್ರದ ಗುಣ ಇಡೀ ದೇಶಕ್ಕೆ ಚೆನ್ನಾಗಿ ಗೊತ್ತಿದೆ ಎಂದರು.