ಕುಂಬಳೆ: ಜಿಲ್ಲಾ ಕ್ಯಾನ್ಸರ್ ಕೇರ್ ಕಾರ್ಯಕ್ರಮದ ಅಂಗವಾಗಿ ಕುಂಬಳೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ(ಸಿ.ಎಚ್.ಸಿ) ಜಿಲ್ಲಾ ವೈದ್ಯಕೀಯ ಕಛೇರಿಯ ಆಶ್ರಯದಲ್ಲಿ ಕ್ಯಾನ್ಸರ್ ರೋಗ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಕಾಸರಗೋಡು ಬ್ಲಾಕ್ ಪಂಚಾಯತಿ ಕ್ಷೇಮಕಾರ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಅಶ್ರಫ್ ಕಾರ್ಲೆ ಉದ್ಘಾಟಿಸಿದರು.
ಸಾಮಾನ್ಯ ಜನರಲ್ಲಿ ಹೆಚ್ಚು ಕಂಡುಬರುವ ಸ್ತನ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್ ಮತ್ತು ಬಾಯಿಯ ಕ್ಯಾನ್ಸರ್‍ನ ಆರಂಭಿಕ ಪತ್ತೆ ಮತ್ತು ಚಿಕಿತ್ಸೆಯನ್ನು ಒದಗಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಕ್ಯಾನ್ಸರ್ ಲಕ್ಷಣಗಳು ಕಂಡಾಗ ಜನರು ಪರೀಕ್ಷೆಗೆ ಒಳಗಾಗಲು ಹಿಂಜರಿಯುತ್ತಾರೆ. ಕೊನೆಯ ಹಂತದಲ್ಲಿ ವೈದ್ಯರನ್ನು ಸಂಪರ್ಕಿಸುತ್ತಾರೆ.ಆಗ ಚಿಕಿತ್ಸೆ ನೀಡಲಾಗದ ಸ್ಥಿತಿ ನಿರ್ಮಾಣವಾಗಿರುತ್ತದೆ. ಈ ಬಗ್ಗೆ ಪಂಚಾಯತಿ ಮಟ್ಟದ ಜಾಗೃತಿ ಕಾರ್ಯಕ್ರಮಗಳು ಪೂರ್ಣಗೊಂಡಿವೆ. ವಾರ್ಡ್‍ಗಳಲ್ಲಿ ಜಾಗೃತಿ ಕಾರ್ಯ ನಡೆಯುತ್ತಿದೆ.
ಬ್ಲಾಕ್ ಪಂಚಾಯತಿ ಸದಸ್ಯೆ ಪ್ರೇಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೈದ್ಯಾಧಿಕಾರಿ ಡಾ.ಕೆ.ದಿವಾಕರ ರೈ, ಡಾ.ಪ್ರಸಾದ್, ಡಾ.ಸ್ಮಿತಾ, ಪಿ.ಎಚ್.ಎನ್ ಮೇಲ್ವಿಚಾರಕಿ ಶೋಭನಾ, ಪಿ.ಎಚ್.ಎನ್ ಕುಂಞಮಿ, ಜೂನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಸಿ.ಸಿ.ಬಾಲಚಂದ್ರನ್ ಮಾತನಾಡಿದರು. ಹೆಲ್ತ್ ಸೂಪರ್ ವೈಸರ್ ಬಿ.ಅಶ್ರಫ್ ಸ್ವಾಗತಿಸಿ, ಹೆಲ್ತ್ ಇನ್ಸ್ಪೆಕ್ಟರ್ ನಿಶಾಮೋಳ್ ವಂದಿಸಿದರು.
ಕುಂಬಳೆ ಸಿ.ಎಚ್.ಸಿಯಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ
0
ಫೆಬ್ರವರಿ 16, 2023
Tags