ಶಿಮ್ಲಾ : ಲಾಹುಲ್ ಮತ್ತು ಸ್ಪಿತಿ ಜಿಲ್ಲೆಯ ಶಿಂಕುಲಾ- ದರ್ಚಾ ನಡುವಿನ ರಸ್ತೆಯಲ್ಲಿ ಹಿಮಪಾತ ಸಂಭವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿಕಾ ಗ್ರಾಮದಲ್ಲಿ ಭಾನುವಾರ ಸಂಜೆ ಹಿಮಪಾತ ಸಂಭವಿಸಿದೆ ಎಂದೂ ಅವರು ತಿಳಿಸಿದ್ದಾರೆ.
ಪೊಲೀಸ್ ಸಿಬ್ಬಂದಿ, ಆರೋಗ್ಯ ಅಧಿಕಾರಿಗಳು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ತಂಡವು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದು, ಇಬ್ಬರು ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಪಾಸಾಂಗ್ ಚೆರಿಂಗ್ ಲಾಮಾ ಹೆಸರಿನ (27) ನೇಪಾಳದ ಮೂಲದ ವ್ಯಕ್ತಿ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ತಂಡ ಮಾಹಿತಿ ನೀಡಿದೆ.