ನವದಹೆಲಿ: ಪಂಜಾಬ್‌ನಲ್ಲಿ ಗಡಿಯೊಳಗೆ ನುಸುಳಿದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಸೇನೆಯ ವಕ್ತಾರ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಗಡಿಯಲ್ಲಿ (ಐಡಿ) ಪಾಕಿಸ್ತಾನದ ಭೂಪ್ರದೇಶದಲ್ಲಿ ಡ್ರೋನ್ ಪತನಗೊಂಡಿದೆ ಎಂದು ಹೇಳಿದ್ದಾರೆ.
ಪಂಜಾಬ್‌ನ ಅಮೃತಸರ ಸೆಕ್ಟರ್‌ನ ಬಾಬಾಪೀರ್ ಗಡಿ ಪೋಸ್ಟ್ ಬಳಿ ಮಂಗಳವಾರ ಮಧ್ಯರಾತ್ರಿ ಘಟನೆ ನಡೆದಿದೆ.
ಡ್ರೋನ್ ದಾಳಿ ತಡೆಗಟ್ಟಲು ಬಿಎಸ್‌ಎಫ್ ಸನ್ನದ್ಧವಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದ ಗಡಿಯೊಳಗೆ ನುಸುಳಿದ ಡ್ರೋನ್ ಮೇಲೆ ಬಿಎಸ್‌ಎಫ್ ಗುಂಡು ಹಾರಿಸಿದೆ ಎಂದು ತಿಳಿಸಿದ್ದಾರೆ.