ಕಾಸರಗೋಡು: ಕನ್ನಡ ಕೊರಳಿನ ಕರೆಯಾಗದೆ, ಕರುಳಿನ ಕರೆಯಾದಾಗ ಮಾತ್ರ ಭಾಷೆ ಭಾಸವಾಗುವುದರ ಜತೆಗೆ ಭಾಷೆ ಬಾಳಾಗಲು ಸಾಧ್ಯ ಎಂದು ಖ್ಯಾತ ಚಿಂತಕ, ವಿಮರ್ಶಕ ಅರವಿಂದ ಚೊಕ್ಕಾಡಿ ತಿಳಿಸಿದ್ದಾರೆ. ಅವರು ಕಾಸರಗೋಡು ನಗರಸಭಾಂಗಣದಲ್ಲಿ ನಡೆದ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಶ್ರೀನಿವಾಸ ರಾವ್ ಪಿ. ಬಿ ಅಧ್ಯಕ್ಷತೆ ವಹಿಸಿದ್ದರು. ಎಸ್. ಎಸ್. ಕೆ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ನಾರಾಯಣ ದೇಲಂಪಾಡಿ, ನಗರಸಭಾ ಸದಸ್ಯೆ ವೀಣಾ ಅರುಣ್, ಸಾಹಿತಿ-ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಈ ಸಂದರ್ಭ ನಿವೃತ್ತರಾದ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಈ ಹಿಂದಿನ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಗಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ. ಶ್ರೀಶ ಕುಮಾರ ಪಿ ಸ್ವಾಗತಿಸಿದರು. ಮಂಜೇಶ್ವರ ಉಪಜಿಲ್ಲಾ ಘಟಕದ ಕಾರ್ಯದರ್ಶಿ ಕವಿತಾ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಪ್ರಭಾವತಿ ಕೆದಿಲಾಯ ವಂದಿಸಿದರು. ಈ ಸಂದರ್ಭ ನಡೆದ ವಿಚಾರ ಗೋಷ್ಠಿಯಲ್ಲಿ ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ರಮೇಶ್ ಕೆ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾ ನಿವೃತ್ತ ಶಿಕ್ಷಣಾಧಿಕಾರಿ ಎನ್. ಕೆ. ಮೋಹನ್ ದಾಸ್ ಹಾಗೂ ನಿವೃತ್ತ ಅಧ್ಯಾಪಕ ವಿಶಾಲಾಕ್ಷ ಪುತ್ರಕಳ ಅವರು ಕಾಸರಗೋಡಿನ ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಕುರಿತಾಗಿ ವಿಚಾರ ಮಂಡಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಸಮಿತಿಯ ಅಧ್ಯಕ್ಷರಾದ ಮುರಳೀಧರ ಬಳ್ಳಕ್ಕುರಾಯ ಉದ್ಘಾಟಿಸಿದರು. ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ರಾವ್ ಪಿ. ಬಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರಾದ ಡಿ. ಮಹಾಲಿಂಗೇಶ್ವರ ರಾಜ್, ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿಯಾದ ಸತ್ಯನಾರಾಯಣ ಕೆ, ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷರಾದ ಸತೀಶ್ ಕೆ, ಟಿ. ಡಿ. ಸದಾಶಿವ ರಾವ್, ಮಹಾಲಿಂಗೇಶ್ವರ ಭಟ್ ಎಂ. ವಿ, ವಿಶಾಲಾಕ್ಷ ಪುತ್ರಕಳ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಠರಾವು ಮಂಡಿಸಿದರು. ರಜತ ಮಹೋತ್ಸವದ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಉಪಾಧ್ಯಕ್ಷರಾದ ಸುಕೇಶ್ ಎ ಸ್ವಾಗತಿಸಿದರು. ಕಾರ್ಯದರ್ಶಿ ಪ್ರದೀಪ್ ಕೆ. ವಿ ಕಾರ್ಯಕ್ರಮ ನಿರೂಪಿಸಿದರು.ಕುಂಬಳೆ ಉಪಜಿಲ್ಲಾ ಘಟಕದ ಉಪಾಧ್ಯಕ್ಷರಾದ ರಾಜೇಶ್ ಉಬ್ರಂಗಳ ವಂದಿಸಿದರು.
ರಜತ ಮಹೋತ್ಸವದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ರಂಗಸಿರಿ ಸಾಂಸ್ಕೃತಿಕ ಪ್ರತಿಷ್ಠಾನ ಬದಿಯಡ್ಕದ ಸದಸ್ಯರಿಂದ ಯಕ್ಷಗಾನ ನಡೆಯಿತು.
ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಜತ ಮಹೋತ್ಸವ ಸಮಾರಂಭ
0
ಫೆಬ್ರವರಿ 27, 2023
Tags