ನವದೆಹಲಿ: ಸುಪ್ರೀಂಕೋರ್ಟ್‌ಗೆ ನೇಮಕಕ್ಕಾಗಿ ಐವರು ನ್ಯಾಯಮೂರ್ತಿಗಳ ಹೆಸರುಗಳನ್ನು ಕೊಲಿಜಿಯಂ ಶಿಫಾರಸು ಮಾಡಿದ್ದು, ಈ ನೇಮಕಾತಿಗೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಹಾಗೂ ಎ.ಎಸ್.ಓಕಾ ಅವರಿದ್ದ ನ್ಯಾಯಪೀಠಕ್ಕೆ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಈ ವಿಷಯ ತಿಳಿಸಿದರು.