ತಿರುವನಂತಪುರಂ: ದೆಹಲಿ ಮತ್ತು ಮುಂಬೈನ ಬಿಬಿಸಿ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆಯು ನಡೆಸಿರುವ ದಾಳಿ ಮಾಧ್ಯಮ ಸ್ವಾತಂತ್ರ್ಯದ ಮೇಲೆ ಹೇರಿರುವ ಅತಿಕ್ರಮಣವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಈ ಕ್ರಮಗಳ ಉದ್ದೇಶ ಅತ್ಯಂತ ಅನುಮಾನಾಸ್ಪದವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಗುಜರಾತ್ ಹತ್ಯಾಕಾಂಡದ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಬಿಜೆಪಿ ಆಡಳಿತ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಬಿಬಿಸಿಯತ್ತ ಮುಖ ಮಾಡಿದೆ ಎಂದು ಪಿಣರಾಯಿ ವಿಜಯನ್ ಹೇಳುತ್ತಾರೆ.
ಇದು ಅಂತರಾಷ್ಟ್ರೀಯ ಸಮುದಾಯದ ಮುಂದೆ ದೇಶವನ್ನು ಮುಜುಗರಕ್ಕೀಡು ಮಾಡುತ್ತದೆ. ಪತ್ರಿಕಾ ಸ್ವಾತಂತ್ರ್ಯದ ವಿರುದ್ಧ ಯಾವುದೇ ತಪ್ಪು ನಡೆ ಆಕ್ಷೇಪಾರ್ಹ. ಇದನ್ನು ಪ್ರಜಾಸತ್ತಾತ್ಮಕ ಸಮಾಜ ಕಾಳಜಿಯಿಂದ ನೋಡಬೇಕು ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.
ಮಂಗಳವಾರ ಬೆಳಗ್ಗೆ 11.45ಕ್ಕೆ ವಿಶೇಷ ತಂಡ ಎರಡೂ ಬಿಬಿಸಿ ಕಚೇರಿಗಳನ್ನು ತಲುಪಿತ್ತು. ತೆರಿಗೆ ವಂಚನೆ ದೂರುಗಳ ಆಧಾರದ ಮೇಲೆ ತನಿಖೆ ನಡೆಸಲಾಗಿದೆ ಎಂದು ಐಟಿ ಇಲಾಖೆ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಎರಡೂ ಕಚೇರಿಗಳ ನೌಕರರ ಫೆÇೀನ್‍ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬಿಬಿಸಿ ಮೇಲೆ ಐ.ಟಿ. ದಾಳಿ ಮಾಧ್ಯಮ ಸ್ವಾತಂತ್ರ್ಯದ ಮೇಲಿನ ಹಕ್ಕುಚ್ಯುತಿ: ಮುಖ್ಯಮಂತ್ರಿ ಪಿಣರಾಯಿ
0
ಫೆಬ್ರವರಿ 14, 2023
Tags