ಬಿಜಾಪುರ : ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 40 ವರ್ಷದ ಬಿಜೆಪಿ ಕಾರ್ಯಕರ್ತ ನೀಲಕಂಠ ಕಕೇಮ್ ಅವರನ್ನು ಮಾವೋವಾದಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ನೀಲಕಂಠ ಕಕೇಮ್ ಅವರು ಆವಪಲ್ಲಿ ಮಂಡಲದ ಅಧ್ಯಕ್ಷರಾಗಿದ್ದರು. ಅವರು ತಮ್ಮ ಕುಟುಂಬಸ್ಥರೊಂದಿಗೆ ಸಂಬಂಧಿಕರ ಮದುವೆಗೆ ಹೋಗಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರ ಮೇಲೆ ಅಪರಿಚಿತ ಮಾವೋವಾದಿಗಳು ಏಕಾಏಕಿ ಚೂಪಾದ ಆಯುಧಗಳಿಂದ ದಾಳಿ ನಡೆಸಿದ್ದು, ಕಕೇಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಭಾನುವಾರ ನಡೆದಿದೆ ಎಂದು ಐಜಿಪಿ ಸುಂದರ್ ರಾಜ್ ಪಿ. ತಿಳಿಸಿದ್ದಾರೆ.
ದಾಳಿಕೋರರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.