ನವದೆಹಲಿ: ಉಕ್ರೇನ್ ಯುದ್ಧದಿಂದಾಗಿ ಇಂಧನ ಸುರಕ್ಷತೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಕಾಳಜಿ ಹೆಚ್ಚುತ್ತಿರುವ ಕಾರಣ ಭಾರತ ಮತ್ತು ಅಮೆರಿಕವು ನಾಗರಿಕ ಪರಮಾಣು ಶಕ್ತಿ ಕ್ಷೇತ್ರದಲ್ಲಿ ಸಹಕಾರಕ್ಕೆ ಹೊಸ ಪ್ರಯತ್ನಗಳನ್ನು ನಡೆಸುತ್ತಿದೆ.
ಈಚೆಗೆ ದೆಹಲಿಯಲ್ಲಿ ನಡೆದ ಮಾತುಕತೆಯ ವೇಳೆ ಅಮೆರಿಕದ ಇಂಧನ ಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯದರ್ಶಿ ಜೆಫ್ರಿ ಆರ್.ಪ್ಯಾಟ್ ಅವರು 2008ರ ಭಾರತ-ಅಮೆರಿಕ ಪರಮಾಣು ಒಪ್ಪಂದದ ಚೌಕಟ್ಟಿನ ಅಡಿಯಲ್ಲಿ ನಾಗರಿಕ ಪರಮಾಣು ಶಕ್ತಿ ಕ್ಷೇತ್ರಗಳಲ್ಲಿ ಸಹಕಾರಕ್ಕೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.