ನವದೆಹಲಿ: ನ್ಯಾಯಮೂರ್ತಿಗಳ ಆಯ್ಕೆಗಿರುವ ಕೊಲಿಜಿಯಂ ವ್ಯವಸ್ಥೆಯು ಬಹುತೇಕ ಪರಿಪೂರ್ಣ ಮಾದರಿಯಾಗಿದೆ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ಯು.ಯು.ಲಲಿತ್ ಶನಿವಾರ ಅಭಿಪ್ರಾಯಪಟ್ಟಿದ್ದಾರೆ.
ನ್ಯಾಯಾಂಗ ಉತ್ತರದಾಯಿತ್ವ ಮತ್ತು ಸುಧಾರಣೆ (ಸಿಜೆಎಆರ್) ಸಂಸ್ಥೆ ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಂವಿಧಾನಿಕ ನ್ಯಾಯಾಲಯಗಳಿಗೆ ನ್ಯಾಯಮೂರ್ತಿಗಳ ಹೆಸರುಗಳನ್ನು ಶಿಫಾರಸು ಮಾಡುವಾಗ ಕಠಿಣ ಪ್ರಕ್ರಿಯೆಗಳನ್ನು ಅನುಸರಿಸಲಾಗುತ್ತಿದೆ ಎಂದಿದ್ದಾರೆ.