ಬದಿಯಡ್ಕ: ಮಾನ್ಯ ಸಮೀಪದ ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಗೋಕರ್ಣ ಅಶೋಕೆಯಲ್ಲಿ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳವರನ್ನು ಭೇಟಿ ಮಾಡಿ ಅನುಗ್ರಹ ಮಂತ್ರಾಕ್ಷತೆಯನ್ನು ಪಡೆದರು.
ಈ ಸಂದರ್ಭದಲ್ಲಿ ಮಾತೃತ್ವಂನ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕುಂಜ, ಕೋಶಾಧಿಕಾರಿ ನರಸಿಂಹ ಭಟ್ ಕಾರ್ಮಾರು, ಸೇವಾ ಸಮಿತಿ ಅಧ್ಯಕ್ಷ ಶ್ರೀಕೃಷ್ಣ ಭಟ್ ಪುದುಕೋಳಿ, ಗೋಪಾಲ ಭಟ್ ಪಟ್ಟಾಜೆ ಮೊದಲಾದವರು ಉಪಸ್ಥಿತರಿದ್ದರು.
ರಾಘವೇಶ್ವರ ಸ್ವಾಮಿಗಳನ್ನು ಭೇಟಿಯಾದ ಕಾರ್ಮಾರು ಕ್ಷೇತ್ರ ಪದಾಧಿಕಾರಿಗಳು
0
ಫೆಬ್ರವರಿ 24, 2023
Tags