ನವದೆಹಲಿ: ಸೋಮವಾರ ಸಂಸತ್ನಲ್ಲಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆ ವಹಿಸಿದ ಪ್ರತಿಪಕ್ಷ ನಾಯಕರ ಸಭೆಯಲ್ಲಿ 16 ಪಕ್ಷಗಳು ಭಾಗವಹಿಸಿವೆ.
ಇಂಡಿಯನ್ ನ್ಯಾಶನಲ್ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಮ್ (ಡಿಎಮ್ಕೆ), ಜನತಾ ದಳ (ಯು), ಆಮ್ ಆದ್ಮಿ ಪಾರ್ಟಿ (ಆಪ್), ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ), ಇಂಡಿಯನ್ ಯೂನಿಯನ್ ಮುಸ್ಲಿಮ್ ಲೀಗ್, ಶಿವಸೇನ (ಉದ್ಧವ್ ಠಾಕ್ರೆ), ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಮ್, ರೆವಲೂಶನರಿ ಸೋಶಿಯಲಿಸ್ಟ್ ಪಾರ್ಟಿ, ರಾಷ್ಟ್ರೀಯ ಜನತಾ ದಳ, ಝಾರ್ಖಂಡ್ ಮುಕ್ತಿ ಮೋರ್ಚ ಮತ್ತು ನ್ಯಾಶನಲ್ ಕಾನ್ಫರೆನ್ಸ್ ಪಕ್ಷಗಳು ಸಭೆಯಲ್ಲಿ ಭಾಗವಹಿಸಿದವು.
ಅದಕ್ಕೂ ಮುನ್ನ ಕಾಂಗ್ರೆಸ್ ಸಂಸದರ ಸಭೆಯು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಸಂಸತ್ನಲ್ಲಿರುವ ಪಕ್ಷದ ಸಂಸದೀಯ ಪಕ್ಷ ಕಚೇರಿಯಲ್ಲಿ ನಡೆಯಿತು. ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಭೆಯಲ್ಲಿ ಪಾಲ್ಗೊಂಡರು.