ಕಾಸರಗೋಡು: ಕೇರಳ ರಾಜ್ಯಾದ್ಯಂತ ಎಸ್ಸೆಸೆಲ್ಸಿ ಪರೀಕ್ಷೆ ಗುರುವಾರ ಆರಂಭಗೊಂಡಿತು. ಮಾರ್ಚ್ 29ರ ವರೆಗೆ ಪರೀಕ್ಷೆ ಮುಂದುವರಿಯಲಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 156ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. 9433ಮಂದಿ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 19566ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ.
ಕಾಸರಗೋಡು ಶೈಕ್ಷಣಿಕ ಜಿಲ್ಲೆಯಲ್ಲಿ 5746ಮಂದಿ ಬಾಲಕರು ಸೇರಿದಂತೆ 10957ಮಂದಿ, ಹೊಸದುರ್ಗ ಶೈಕ್ಷಣಿಕ ಜಿಲ್ಲೆಯಲ್ಲಿ 4222ಮಂದಿ ಬಾಲಕಿಯರು ಸೇರಿದಂತೆ ಒಟ್ಟು 8609ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ. ಕಾಸರಗೋಡಿನ 81ಹಾಗೂ ಕಾಞಂಗಾಡಿನ 75ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಕಾಸರಗೋಡು ಶೈಕ್ಷಣಿಕ ಜಿಲ್ಲೆಯ ನಾಯಮರ್‍ಮೂಲೆಯ ತನ್‍ಬೀಹುಲ್ ಇಸ್ಲಾಮಿಕ್ ಹೈಯರ್ ಸಎಕೆಂಡರಿ ಶಾಲೆಯಲ್ಲಿ ಅತಿ ಹೆಚ್ಚು ಅಂದರೆ 855ಮಂದಿ ವಿದ್ಯಾರ್ಥಿಗಳು ಪರೀಕಷೆ ಬರೆಯುತ್ತಿದ್ದಾರೆ. ಮಂಜೇಶ್ವರದ ಮೂಡಂಬೈಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಕನಿಷ್ಠ ಸಂಖ್ಯೆ(17ಮಂದಿ)ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಸರ್ಕಾರಿ ಶಾಲೆಯ 10922ಮಂದಿ, ಅನುದಾನಿತ ಶಾಲೆಯ 6859ಮಂದಿ ಹಾಗೂ ಅನುದಾನರಹಿತ ಶಾಲೆಗಳ 1785ಮಂದಿ ವಿದ್ಯಾರ್ಥಿಗಳು ಎಸ್ಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ.