ತಿರುವನಂತಪುರಂ: ರಾಜ್ಯದಲ್ಲಿ ಬೇಸಿಗೆಯ ಬಿಸಿ ವ್ಯಾಪಕಮಟ್ಟದಲ್ಲಿ ಏರಿಕೆಯಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ತಾಪಮಾನ 41.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಪಾಣತ್ತೂರು (ಕಾಸರಗೋಡು), ಅರಳಂ (ಕಣ್ಣೂರು), ನಿಲಂಬೂರ್ (ಮಲಪ್ಪುರಂ) ಮತ್ತು ಮನ್ನಾರ್ಕಾಡ್ (ಪಾಲಕಾಡ್)ಗಳಲ್ಲಿ ತಾಪಮಾನ 40 ಡಿಗ್ರಿಗಿಂತ ಹೆಚ್ಚಿದೆ.
ಎರ್ನಾಕುಳಂ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ 38 ಡಿಗ್ರಿ ಉಷ್ಣತೆ ದಾಖಲಾಗಿದೆ. ದಕ್ಷಿಣ ಜಿಲ್ಲೆಗಳಲ್ಲಿ ಹಗಲಿನ ತಾಪಮಾನವು ತುಲನಾತ್ಮಕವಾಗಿ ಕಡಿಮೆಯಾಗಿದೆ. ತಿರುವನಂತಪುರಂ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ತಾಪಮಾನ 35 ಡಿಗ್ರಿಗಿಂತ ಹೆಚ್ಚಿದೆ. ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 5 ದಿನಗಳ ಕಾಲ ಉಷ್ಣತೆ ಏರುಗತಿಯಲ್ಲೇ ಒಣಹವೆಯಿಂದೊಡಗೂಡಿ ಮುಂದುವರಿಯಲಿದೆ.
ರಾಜ್ಯದಲ್ಲಿ ಹೆಚ್ಚಿದ ಬೇಸಿಗೆಯ ಬಿಸಿ: ಕಣ್ಣೂರು ವಿಮಾನ ನಿಲ್ದಾಣದಲ್ಲಿ ದಿನದ ತಾಪಮಾನ 41.3 ಡಿಗ್ರಿ ಸೆಲ್ಸಿಯಸ್ ದಾಖಲು
0
ಮಾರ್ಚ್ 06, 2023