ಪೆರ್ಲ: ಪೆರ್ಲ ಸೇವಾ ಸಹಕಾರಿ ಬ್ಯಾಂಕ್‍ನ ನೂತನ ನಿರ್ದೇಶಕರ ಆಯ್ಕೆಗಾಗಿ ಮಾ. 19ರಂದು ಚುನಾವಣೆ ನಡೆಯಲಿದ್ದು, ಗುರುವಾರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ತಿಗೊಂಡಿದೆ. ಒಟ್ಟು 42ನಾಮಪತ್ರಗಳು ಸಲ್ಲಿಕೆಯಾಗಿದ್ದು, ಮಾ. 3ರಂದು ಸೂಕ್ಷ್ಮ ಪರಿಶೋಧನೆ ನಡೆಯಲಿದೆ. 4ರಂದು ನಾಮಪತ್ರ ಹಿಂತೆಗೆಯಲು ಕೊನೆಯ ದಿವಾಗಿರುತ್ತದೆ. ಒಟ್ಟು 11ಮಂದಿ ನಿರ್ದೇಶಕರ ಆಯ್ಕೆ ನಡೆಯಲಿದೆ. ಸಹಕಾರಿ ಇಲಾಖೆಯ ಸಹಾಯನ ನಿಬಂಧಕ ಬೈಜು ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಪೆರ್ಲ ಸೇವಾ ಸಹಕಾರಿ ಬ್ಯಾಂಕ್‍ನಲ್ಲಿ ಪ್ರಸಕ್ತ ಸಹಕಾರ ಭಾರತಿ ಆಡಳಿತ ನಡೆಸುತ್ತಿದೆ. ಈ ಬಾರಿ ಸಂಸ್ಕಾರ ಭಾರತಿ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಪೆರ್ಲ ಶ್ರೀ ಸತ್ಯನಾರಾಯಣ ಮಂದಿರ ವಠಾರದಿಂದ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು.ಸದಸಿವ ಭಟ್ ಹರಿನಿಲಯ, ಉದಯ ಚೆಟ್ಟಿಯಾರ್, ಸತೀಶ್ ಕುಲಾಲ್ ಮುಂತಾದವರು ನೇತೃತ್ವ ವಹಿಸಿದ್ದರು.
ಪೆರ್ಲ ಸೇವಾ ಸಹಕಾರಿ ಬ್ಯಾಂಕ್ ಚುನಾವಣೆ:-ಒಟ್ಟು 42 ನಾಮಪತ್ರ ಸಲ್ಲಿಕೆ
0
ಮಾರ್ಚ್ 02, 2023