ಪತ್ತನಂತಿಟ್ಟ: ಶಬರಿಮಲೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಮಂಗಳವಾರ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದಿದ್ದು, ಬಸ್‌ನಲ್ಲಿದ್ದ 62 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದು ತಮಿಳುನಾಡಿಗೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಬಸ್‌ನಲ್ಲಿ ತಮಿಳುನಾಡಿನ ಮೈಲಾಡತುರೈ ಜಿಲ್ಲೆಯ ಒಂಬತ್ತು ಮಕ್ಕಳು ಸೇರಿದಂತೆ 64 ಯಾತ್ರಿಕರನ್ನು ಒಳಗೊಂಡಿದ್ದ ಬಸ್ ಮಧ್ಯಾಹ್ನ 1.30 ರ ಸುಮಾರಿಗೆ ನಿಲಕಲ್ ಬಳಿಯ ಎಲವುಂಕಲ್‌ನಲ್ಲಿ ರಸ್ತೆಯಿಂದ ಕಂದಕಕ್ಕೆ ಉರುಳಿದೆ.
ಯಾತ್ರಿಕರಲ್ಲಿ 62 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಪತ್ತನಂತಿಟ್ಟ ಮತ್ತು ಎರುಮೇಲಿಯ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.